ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಇದೊಂದು ಪಾಪದ ಕೃತ್ಯ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ದೂರು ಹಾಗೂ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಮಾಜಿ ಶಾಸಕ ಪ್ರೀಂತಂ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಅಶ್ಲೀಲ ವಿಡಿಯೋ ಹಂಚಿಕೆ ಒಂದು ಪಾಪದ ಕೃತ್ಯ ಎಂದು ಅಭಿಪ್ರಾಯಪಟ್ಟಿದೆ.
ಇಂತಹ ಪಾಪದ ಕೃತ್ಯಗಳಿಂದ ಸಂತ್ರಸ್ತೆಯರನ್ನು ಅವಮಾನಕ್ಕೆ ಗುರಿ ಮಾಡಲಾಗಿದೆ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ. ಈ ಹಿಂದೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಆದೇಶಿಸಲಾಗಿತ್ತು.
ಆದರೆ ಅರ್ಜಿದಾರರು ಜಾಮೀನು ಪಡೆದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಈ ವೇಳೆ ಪ್ರೀತಂ ಗೌಡ ಪರ ವಕೀಲರು ಅರ್ಜಿದಾರರನ್ನು ಎಸ್‌ಐಟಿ ವಿಚಾರಣೆಗೆ ಕರೆದಿಲ್ಲ ಎಂದು ತಿಳಿಸಿದ್ದಾರೆ. ವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ಸೆ.26ರಕ್ಕೆ ಮುಂದೂಡಿದೆ.