Join The Telegram | Join The WhatsApp |
ನವದೆಹಲಿ : ಚುನಾವಣೆ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಸಿಂಧು ಗೊಳಿಸಿದ್ದ ಕರ್ನಾಟಕ ಹೈಕೋರ್ಟಿಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.ಈ ಮೂಲಕ ಇದರಿಂದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಇಂದು ಸುಪ್ರೀಂ ಕೋರ್ಟಿನ ಸಿಜೆಐ ಪೀಠದಲ್ಲಿ ನಡೆದಿದ್ದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ ವಿಚಾರಣೆ ನಡೆಸಿದ ಸುಪ್ರೀಂ, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ಆಯ್ಕೆ ಪ್ರಶ್ನಿಸಿ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಲಾಗಿತ್ತು.
ಎ ಮಂಜು ಹಾಗೂ ದೇವರಾಜೇಗೌಡ ಹೈಕೋರ್ಟಿಗೆ ಈ ಕುರಿತಾಗಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ವಿಚಾರಣೆ ನಡೆಸಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿತ್ತು.
ಈ ಕುರಿತಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಪ್ರಜ್ವಲ್ ರೇವಣ್ಣ ಸಲ್ಲಿಸಿದರು ಈ ಸಂದರ್ಭದಲ್ಲಿ ಹೈ ಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಗ್ನೇ ನೀಡಿದೆ ಈ ಮೂಲಕ ಇದರಿಂದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
Join The Telegram | Join The WhatsApp |