Ad imageAd image

ಪ್ರಜ್ವಲ್ ರೇವಣ್ಣ ಅತ್ಯಾಚಾರ ಶಿಕ್ಷೆ : ಮಧ್ಯಾಹ್ನ 2.45ಕ್ಕೆ ಕಾಯ್ದಿರಿಸಿದ ಕೋರ್ಟ್

Bharath Vaibhav
ಪ್ರಜ್ವಲ್ ರೇವಣ್ಣ ಅತ್ಯಾಚಾರ ಶಿಕ್ಷೆ : ಮಧ್ಯಾಹ್ನ 2.45ಕ್ಕೆ ಕಾಯ್ದಿರಿಸಿದ ಕೋರ್ಟ್
WhatsApp Group Join Now
Telegram Group Join Now

ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಇದೀಗ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಶಿಕ್ಷೆ ಆದೇಶವನ್ನು ಮಧ್ಯಾಹ್ನ 2.45ಕ್ಕೆ ಕೋರ್ಟ್ ಕಾಯ್ದಿರಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು.

ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ.

ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ ಕೆಲಸದ ಮಹಿಳೆ ಆಕೆಯ ಮೇಲೆ ಅಧಿಕಾರಯುತ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿರುವಂತಹ ಅಪರಾಧ ಸಾಬೀತಾಗಿದೆ. ದುರಾದೃಷ್ಟವಶಾತ್ ಆಕೆಗೆ ಯಾವುದೇ ಸ್ಥಾನಮಾನವಿಲ್ಲ ವಿಡಿಯೋ ನೋಡಿದರೆ ಕೃತ್ಯದ ತೀವ್ರತೆ ಸ್ಪಷ್ಟವಾಗಿದೆ 10 ಸಾವಿರ ಸಂಬಳಕ್ಕೆ ಇವರು ಕೆಲಸ ಮಾಡುತ್ತಿದ್ದರು ಎಂದು ಬಿಎನ್ ಜಗದೀಶ್ ವಾದಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!