ಬೆಂಗಳೂರು: ನಟ, ನಿರ್ದೇಶಕ ಪ್ರಕಾಶ್ ರಾಜ್ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.
ವಿಧಾನ ಸೌಧದಲ್ಲಿ ನಡೆದ ಸಭೆಯ ನಂತರ ಪ್ರಕಾಶ್ ರಾಜ್ ಅವರ ಆಯ್ಕೆಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಈ ಬಾರಿಯ ಚಲನಚಿತ್ರೋತ್ಸವ ಜನೇವರಿ 29ರಿಂದ ಫೆಬ್ರವರಿ 3ರ ವರೆಗೆ ನಡೆಯಲಿದೆ ಸುಮಾರು 200 ವಿವಿಧ ಭಾಷೆ ಯ ಸಿನಿಮಾಗಳು ಪ್ರದರ್ಶನ ಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಮಹಿಳಾ ಸಬಲೀಕರಣದ ಧೀಮ್ ನಲ್ಲಿ ಚಿತ್ರೋತ್ಸವ ನಡೆಯುಲಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದರು, ಚಲನ ಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ, ನಿರ್ದೇಶಕ ತರುಣ್, ಸುಧೀರ್,ಶರತ್, ಲೋಹಿತಾಶ್ವ ಸೇರಿದಂತೆ ಚಿತ್ರರಂಗದ ಪ್ರಮುಖರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್




