ಬಾಗಲಕೋಟೆ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬಾಗಲಕೋಟೆ, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಬಾಗಲಕೋಟೆ, ಹಾಗೂ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕ ಬಾಗಲಕೋಟೆಯ ಸಹಯೋಗದೊಂದಿಗೆ ಆಯೋಜಿಸಲಾದ ಕಲಾವಿದರು, ಸಾಹಿತಿಗಳು, ಪತ್ರಕರ್ತರು, ಮತ್ತು ಸಂಘಟಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ಇಂದು ಬಾಗಲಕೋಟೆಯಲ್ಲಿ ಯಶಸ್ವಿಯಾಗಿ ನೆರವೇರಿತು.
ಈ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಆರ್. ಬಿ. ತಿಮ್ಮಾಪೂರ ಅವರು ಉದ್ಘಾಟಿಸಿ, ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ವಿತರಿಸಿದರು ಮತ್ತು ಹೊಸ ಕೃತಿಗಳ ಲೋಕಾರ್ಪಣೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಪತ್ರಿಕೋದ್ಯಮ, ಮತ್ತು ಸಂಘಟನೆಯ ಕ್ಷೇತ್ರದಲ್ಲಿ ತೊಡಗಿರುವವರ ಮಕ್ಕಳ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಮಾತನಾಡಿದ ಸಚಿವ ಆರ್. ಬಿ. ತಿಮ್ಮಾಪೂರ ಅವರು, “ಕನ್ನಡ ಸಾಹಿತ್ಯ, ಜಾನಪದ, ಮತ್ತು ಪತ್ರಿಕೋದ್ಯಮ ಕ್ಷೇತ್ರಗಳು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಈ ಕ್ಷೇತ್ರಗಳಲ್ಲಿ ತೊಡಗಿರುವವರ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯವಾಗಿದೆ,” ಎಂದು ಹೇಳಿದರು. ಕೃತಿ ಲೋಕಾರ್ಪಣೆಯ ಮಹತ್ವವನ್ನು ಒತ್ತಿ ಹೇಳಿದರು.