ಬೀದರ್ : ಜಿಲ್ಲಾ ಉಪ್ಪಾರ ಸಮಾಜ ಹಾಗೂ ಮಹೇಶ್ವರಿ ಎಜುಕೇಷನ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆಗೈದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ನಗರದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಜುಲೈ 15 ರ ಒಳಗೆ ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರಗಳೊಂದಿಗೆ ನಗರದ ಜಿಲ್ಲಾ ಉಪ್ಪಾರ ಸಮಾಜದ ಕಚೇರಿಯಲ್ಲಿ ಖುದ್ದಾಗಿ ಅಥವಾ ವ್ಯಾಟ್ಸ್‍ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.
ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8970497591 ಅಥವಾ 9243997764 (ಅನಿಲಕುಮಾರ ಉಪ್ಪಾರ)ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ವರದಿ : ಸಂತೋಷ ಬಿಜಿ ಪಾಟೀಲ