Ad imageAd image

ಗಾಂಧೀ ಭಾರತ ಸಮಿತಿಯ ಉಪಾಧ್ಯಕ್ಷ ಹಾಗೂ ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ.

Bharath Vaibhav
ಗಾಂಧೀ ಭಾರತ ಸಮಿತಿಯ ಉಪಾಧ್ಯಕ್ಷ ಹಾಗೂ ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ.
WhatsApp Group Join Now
Telegram Group Join Now

ಬೆಂಗಳೂರು :ಬೆಳಗಾವಿಯಲ್ಲಿ ಜನವರಿ 21 ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮದ ರೂಪುರೇಷೆಗಳನ್ನು ಕುರಿತು ಮಾನ್ಯ ಆಹಾರ ಸಚಿವರು ಹಾಗೂ ಗಾಂಧೀ ಭಾರತ ಉಪಾಧ್ಯಕ್ಷರಾದ ಕೆಹೆಚ್. ಮುನಿಯಪ್ಪ ರವರು ಇಂದು ಕೆಪಿಸಿಸಿ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತ ರೊಂದಿಗೆ ಸಭೆಯನ್ನು ನಡೆಸಿದರು.

2024ರ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದಾಗಿ ರದ್ದುಗೊಂಡಿತ್ತು.

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂಬ ಘೋಷವಾಖ್ಯೆ ದೊಂದಿಗೆ ನಡೆಯಲಿರುವ ಸಮಾವೇಶದಲ್ಲಿ ಪ್ರತಿ ತಾಲ್ಲೂಕಿನಿಂದ ಕನಿಷ್ಠ 100 ಕಾರ್ಯಕರ್ತರು ಭಾಗವಹಿಸಬೇಕೆಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಮುಖಂಡರಿಗೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಸದಸ್ಯರು ಮುಖಂಡರು, ಮಾಜಿ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಸದಸ್ಯರು ಹಾಜರಿರಬೇಕು

ಸೇವಾದಳ ,ಮಹಿಳಾ ಕಾಂಗ್ರೆಸ್, ಯೂತ್ ಕಾಂಗ್ರೆಸ್, ವತಿಯಿಂದ ಕಾರ್ಯಕರ್ತರನ್ನು ಒಟ್ಟಿಗೆ ಕರೆತರುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಸ್ವಯಂಪ್ರೇರಿತವಾಗಿ ಗಾಂಧೀ ಭಾರತ ಕಾರ್ಯಕ್ರಮದಲ್ಲಿ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ,ಜಿಲ್ಲಾ ಅಧ್ಯಕ್ಷರಾದ ಸಿಆರ್,ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಗನ್ನಾಥ್, ಬಯ್ಯಪ್ಪಾ ಅಧ್ಯಕ್ಷರಾದ ಶಾಂತಕುಮಾರ್, ಸದಸ್ಯರಾದ ಮಂಜುನಾಥ್,ಪ್ರಸನ್ನಕುಮಾರ್,ಹಾಗೂ ಜಿಲ್ಲೆಯ ಎಲ್ಲಾ ವಿಭಾಗಗಳ ಮುಖಂಡರು ಉಪಸ್ಥಿತರಿದ್ದರು.

ವರದಿ: ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!