ಸೇಡಂ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇಡಂ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಪೂರ್ವ ಪ್ರಾಥಮಿಕ ಎಲ್ ಕೆ ಜಿ ಯು ಕೆ ಜಿ ಉದ್ಘಾಟನಾ ಸಮಾರಂಭವು ಮುಧೋಳ್ ಅಂಗನವಾಡಿ 7ನೇ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಿಡಿಪಿಒ ಅನುರಾಧ ಪಾಟೀಲ್, ಹಿರಿಯ ಮೇಲ್ವಿಚಾರಕಿ ಮೀನಾಕ್ಷಿ ಮಹಾನಂದ, ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಪಂಚಾಯತಿ ಉಪಾಧ್ಯಕ್ಷರು ರಾಮರೆಡ್ಡಿ, ಪಂಚಾಯ್ತಿ ಸದಸ್ಯರು ದೌಲತ್ ಬಿ, ಉರ್ದು ಮೀಡಿಯಂ ಶಾಲೆಯ ಮುಖ್ಯ ಗುರುಗಳು ಇಕ್ಬಾಲ್, ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ರಾಧಿಕಾ ಮತ್ತು ಎಲ್ಲಾ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು ಮಕ್ಕಳ ತಾಯಂದಿರು, ಮುದ್ದು ಮಕ್ಕಳು ಸೇರಿದಂತೆ ಇನ್ನಿತರರು ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




