ಶಿವಮೊಗ್ಗ: ನಾಲ್ಕು ತಿಂಗಳ ಗರ್ಭಿಣಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ.
ಶ್ವೇತಾ (30) ಮೃತ ದುರ್ದೈವಿ. ಮನೆಯವರ ಕಿರುಕುಳಕ್ಕೆ ನೊಂದು ಮಾರ್ಚ್ 29 ರಂದು ಗರ್ಭಿಣಿ ಶ್ವೇತಾ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭಿರ ಸ್ಥಿತಿಯಲ್ಲಿದ್ದ ಆಕೆಯನ್ನು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಶ್ವೇತಾ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಸೊರಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಶ್ವೇತಾಳ ಅತ್ತೆ-ಮಾವ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಶ್ವೇತಾಳ ಮಾಸ ಸಣ್ಣಪ್ಪ, ಅತ್ತೆ ಜಾನಕಿ, ಹೇಮಂತ್, ದಿವ್ಯಾ ಸೇರಿ ನಾಲ್ವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.




