Ad imageAd image

ನಂದಿನಿ ಬ್ರಾಂಡ್ ಹೆಸರಿನಲ್ಲಿ ಇಡ್ಲಿ, ದೋಸೆ ಹಿಟ್ಟು ಮಾರಾಟಕ್ಕೆ ತಯಾರಿ 

Bharath Vaibhav
ನಂದಿನಿ ಬ್ರಾಂಡ್ ಹೆಸರಿನಲ್ಲಿ ಇಡ್ಲಿ, ದೋಸೆ ಹಿಟ್ಟು ಮಾರಾಟಕ್ಕೆ ತಯಾರಿ 
WhatsApp Group Join Now
Telegram Group Join Now

ಬೆಂಗಳೂರು : ಕೆಎಂಎಫ್ ನಂದಿನಿ ಬ್ರಾಂಡ್ ಇದೀಗ ದೇಶ ಸೇರಿದಂತೆ ವಿದೇಶದಲ್ಲೂ ಪ್ರಸಿದ್ದಿ ಪಡೆದಿದ್ದು, ಇದೀಗ ಹೊಸ ಹೆಜ್ಜೆಯನ್ನು ಇಡಲು ಮುಂದಾಗಿದೆ.

ಇಷ್ಟು ದಿನ ಹಾಲು, ತುಪ್ಪ, ಖಾದ್ಯಗಳಲ್ಲಿ ಹೆಸರುವಾಸಿಯಾಗಿರುವ ನಂದಿನಿ ಬ್ರಾಂಡ್ ಹೆಸರಿನಲ್ಲಿ ಇಡ್ಲಿ, ದೋಸೆ ಸಿದ್ದ ಹಿಟ್ಟನ್ನು ಮಾರುಕಟ್ಟೆ ಬಿಡುಗಡೆ ಮಾಡಲು ಮುಂದಾಗಿದ್ದು, 10 ದಿನದೊಳಗೆ ಹೊಸ ಉತ್ಪನ್ನ ಮಾರುಕಟ್ಟೆಗೆ ಪ್ರವೇಶಿಸಲಿದೆ.

ವರದಿಯ ಪ್ರಕಾರ, ಮೊದಲ ಹಂತದಲ್ಲಿ ಪ್ರತಿದಿನ 10 ರಿಂದ 20 ಸಾವಿರ ಕೆಜಿ ಹಿಟ್ಟನ್ನು ಬೆಂಗಳೂರು ನಗರದಲ್ಲಿ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದು, ಇದಕ್ಕಾಗಿಯೇ ಜಯನಗರದಲ್ಲಿ ಪ್ಯಾಕಿಂಗ್ ಘಟಕವನ್ನು ತೆರೆಯಲಾಗಿದೆ.

ಈಗಾಗಲೇ ಸಿದ್ದ ಹಿಟ್ಟನ್ನು ಮಾರಾಟಕ್ಕೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿದ್ದು, ಶೀಘ್ರವೇ ಮಾರುಕಟ್ಟೆಗೆ ಪ್ರವೇಶಿಸಲಿದೆ. ಅಲ್ಲದೇ ಉಳಿದ ಇಡ್ಲಿ, ದೋಸೆ ಹಿಟ್ಟಿಗಿಂತ ಕಡಿಮೆ ದರದಲ್ಲಿ ನಂದಿನಿ ಬ್ರಾಂಡ್ ನ ಹಿಟ್ಟುಗಳು ಜನರಿಗೆ ದೊರೆಯಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ಎಂಕೆ ಜಗದೀಶ್ ಹೇಳಿದರು.

450 ಗ್ರಾಂ ಹಾಗೂ 900 ಗ್ರಾಂ ಪ್ಯಾಕೆಟ್ ಗಳಲ್ಲಿ ಇಡ್ಲಿ, ದೋಸೆ ಹಿಟ್ಟುಗಳು ಮಾರುಕಟ್ಟೆಗೆ ಬರಲಿದ್ದು, ಸದ್ಯದಲ್ಲೇ ದರ ಹಾಗೂ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!