ಭಾಲ್ಕಿ: ಇಲ್ಲಿಯ ಬಾಲಾಜಿ(ರಾಮ) ಮಂದಿರದಲ್ಲಿ ಡಿ.ಕೆ.ಸಿದ್ರಾಮ ಅವರ ಅಭಿಮಾನಿ ಬಳಗದ ವತಿಯಿಂದ ಶನಿವಾರ ಬೆಳಿಗ್ಗೆ ೧೦ಕ್ಕೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ನಾರಂಜಾ ಸಹಕಾರ ಸಕ್ಕರೆ ಕಾರಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅಧ್ಯಕ್ಷತೆ ವಹಿಸಲಿದ್ದಾರೆ.
ಪತ್ರಕರ್ತರ ಸಂಘದ ಗೌರವ ಸಲಹೆಗಾರ ಬಾಬು ವಾಲಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಕೆ.ಗಣಪತಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಶಿವರಾಜ ಗಂದಗೆ, ತಾಲೂಕು ಬಿಜೆಪಿ ಅಧ್ಯಕ್ಷ ವೀರಣ್ಣ ಕಾರಬಾರಿ, ಯುವ ಮುಖಂಡ ಶಿವು ಲೋಖಂಡೆ, ಪ್ರತಾಪ ಪಾಟೀಲ್, ಯುವ ಉದ್ಯಮಿ ಚನ್ನಬಸವಣ್ಣ ಬಳತೆ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟೆ, ಪ್ರಧಾನ ಕಾರ್ಯದರ್ಶಿ ಗಣಪತಿ ಬೋಚರೆ ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ: ಸಂತೋಷ ಬಿಜಿ ಪಾಟೀಲ




