Ad imageAd image

ಕಾಂಗ್ರೆಸ್ ನ್ನು ಹುಡುಕಿ ಹುಡುಕಿ ಸ್ವಚ್ಛ ಮಾಡಬೇಕಿದೆ : ಪ್ರಧಾನಿ ಮೋದಿ

Bharath Vaibhav
ಕಾಂಗ್ರೆಸ್ ನ್ನು ಹುಡುಕಿ ಹುಡುಕಿ ಸ್ವಚ್ಛ ಮಾಡಬೇಕಿದೆ : ಪ್ರಧಾನಿ ಮೋದಿ
WhatsApp Group Join Now
Telegram Group Join Now

ಬಾಗಲಕೋಟೆ: ಕಾಂಗ್ರೆಸ್ ನ್ನು ಹುಡುಕಿ ಹುಡುಕಿ ಸ್ವಚ್ಛ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಟ್ಯಾಂಕರ್ ಮಾಫಿಯಾ ನಡೆಯುತ್ತಿದೆ.

2 ಜಿ ಸ್ಕ್ಯಾಮ್ ನಲ್ಲಿದ್ದವರಿಗೆ ಶಿಕ್ಷೆಯಾಗಬೇಕಿದೆ. ಕಾಂಗ್ರೆಸ್ ನ್ನು ಹುಡುಕಿ ಹುಡುಕಿ ಸ್ವಚ್ಚಗೊಳಿಸಬೇಕಿದೆ. ಕರ್ನಾಟಕದಿಂದ ಕಾಂಗ್ರೆಸ್ ಸರ್ಕಾರವನ್ನು ಸ್ವಚ್ಛ ಮಾಡಿ ಎಂದು ಹೇಳಿದರು.

ದೇಶದಲ್ಲಿ 70 ವರ್ಷಗಳ ಕಾಲ ಆಡಳಿತ ನಡೆಸಿದರೂ ಕಾಂಗ್ರೆಸ್ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಬಡತನ ನಿರ್ಮೂಲನೆ ಮಾಡುತ್ತೇವೆ ಎಂದು ಹೇಳಿದವರು ಮಾಡಿಲ್ಲ. ಕಾಂಗ್ರೆಸ್ ಅಧಿಕಾರ ಬಂದಾಗಲೆಲ ಆತಂಕವಾದ ಶುರುವಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕೆಫೆಯಲ್ಲಿ ಬಂಬ್ ಸ್ಫೋಟ ಮಾಡಲಾಯಿತು. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ ನಡೆಯಿತು.

ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೇಕ್ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಭಯದ ವಾತಾವರಣವಿದೆ. ಕಾಂಗ್ರೆಸ್ ಸರ್ಕಾರ ಇವುಗಳಿಗೆ ಬೆಂಬಲ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬಾದಾಮಿ, ಐಹೊಳೆ, ಪಟ್ಟದಕಲ್ಲು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುತ್ತೇವೆ. ಬಡವರಿಗೆ ಆರ್ಥಿಕ ನೆರವು ನೀಡುತ್ತೇವೆ. ಬಿಜೆಪಿ ಸರ್ಕಾರ ಅಧಿಕರಕ್ಕೆ ಬಂದ ಬಳಿಕ ದೇಶದಲ್ಲಿ ಗ್ರಾಮ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.ಹಳ್ಳಿ ಹಳ್ಳಿಗಳಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು. ಆದರೆ ಕಾಂಗ್ರ್ರೆಸ್ ಸರ್ಕಾರದಿಂದ ಯಾವುದೂ ಸಾಧ್ಯವಾಗಿಲ್ಲ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಿ. ಕಾಂಗ್ರೆಸ್ ನವರಿಗೆ ಬಡವರ ಬಗ್ಗೆ, ವಂಚಿತರ ಬಗ್ಗೆ ಚಿಂತೆ ಇಲ್ಲ. ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ. ಮೇ 7ಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಶಿಕ್ಷೆ ನೀಡಿ ಎಂದು ಕರೆ ನೀಡಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!