ನವದೆಹಲಿ : ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಸವ ಜಯಂತಿಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಬಸವ ಜಯಂತಿಯ ಶುಭ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜಕ್ಕಾಗಿ ಅವರ ದೃಷ್ಟಿಕೋನ ಮತ್ತು ಅಂಚಿನಲ್ಲಿರುವವರ ಮೇಲೆತ್ತಲು ಅವರ ಅವಿಶ್ರಾಂತ ಪ್ರಯತ್ನಗಳು ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.




