Ad imageAd image

ಮನೋಜ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸಂತಾಪ

Bharath Vaibhav
ಮನೋಜ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸಂತಾಪ
WhatsApp Group Join Now
Telegram Group Join Now

ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮನೋಜ್ ಕುಮಾರ್ ಅವರು ತಮ್ಮ 87ನೇ ವಯಸ್ಸಿನಲ್ಲಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು. ಅವರ ನಿಧನಕ್ಕೆ ಮನರಂಜನಾ ಉದ್ಯಮದಿಂದ ಹಿಡಿದು ರಾಜಕೀಯವರೆಗೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ: ಪಿಎಂ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ, ”ಪ್ರಸಿದ್ಧ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಇಂಡಿಯನ್​ ಸಿನಿಮಾದ ಐಕಾನ್​ ಆಗಿದ್ದರು. ವಿಶೇಷವಾಗಿ ಅವರ ದೇಶಭಕ್ತಿಯ ಸಿನಿಮಾ ಉತ್ಸಾಹಕ್ಕಾಗಿ ಅವರನ್ನು ಸ್ಮರಿಸಲಾಗುತ್ತಿದೆ. ಮನೋಜ್ ಅವರ ಕೆಲಸಗಳು ರಾಷ್ಟ್ರೀಯ ಹೆಮ್ಮೆಯ ಚೈತ್ಯನ್ಯವನ್ನು ಸೃಷ್ಟಿಸಿದೆ ಮತ್ತು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಆಲೋಚನೆಗಳಿವೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರಪತಿ ಮುರ್ಮು ಟ್ವೀಟ್: ”ಪ್ರಸಿದ್ಧ ನಟ ಮತ್ತು ಫಿಲ್ಮ್ ಮೇಕರ್ ಮನೋಜ್ ಕುಮಾರ್ ಜಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಭಾರತೀಯ ಚಿತ್ರರಂಗದಲ್ಲಿ ಸಾಧನೆಗೈದು ಹೊರಟರು. ಸುದೀರ್ಘ ಮತ್ತು ವಿಶಿಷ್ಟ ವೃತ್ತಿಜೀವನದಲ್ಲಿ, ದೇಶಭಕ್ತಿಯ ಭಾವನೆಯನ್ನು ಉತ್ತೇಜಿಸುವಂತಹ ಚಲನಚಿತ್ರಗಳಿಗೆ ಹೆಸರುವಾಸಿಯಾದರು. ಅವರು ಜೀವ ತುಂಬಿದ ರಾಷ್ಟ್ರೀಯ ನಾಯಕರು, ರೈತರು ಮತ್ತು ಸೈನಿಕರ ಪಾತ್ರಗಳು ನಮ್ಮ ಸ್ಮರಣೆಯಲ್ಲಿ ಉಳಿಯಲಿದೆ. ಅವರ ಸಿನಿಮಾಗಳು ರಾಷ್ಟ್ರೀಯ ಹೆಮ್ಮೆಯನ್ನು ಹುಟ್ಟುಹಾಕುತ್ತವೆ ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!