ಬೆಂಗಳೂರು: ಸರ್ಕಾರಿ ಶಿಕ್ಷಣ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರ ಎಂದೇ ಹೆಸರುವಾಸಿಯಾಗಿರುವ ಶಾಸಕ ಎಸ್ ಮುನಿರಾಜು ಹೇಳಿದರು.
ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚೊಕ್ಕಸಂದ್ರ ವಾರ್ಡಿನ ನಾಗಸಂದ್ರ ಕಾಲೋನಿ ರುಕ್ಮಿಣಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಿರ್ಮಿಸಿರುವ ನೂತನ ಶಾಲಾ ಕೊಠಡಿಗಳನ್ನು ರಿಬ್ಬನ್ ಕತ್ತರಿ ಉದ್ಘಾಟಿ ಮಾತನಾಡಿ ಅವರು ನಾನು ಪ್ರಥಮ ಬಾರಿಗೆ ಶಾಸಕನಾಗಿದಾಗ ಸರ್ಕಾರಿ ಶಾಲೆಗಳಲ್ಲಿ ಮೂಲ ಭೂತ ಸೌಕರ್ಯ ಕೊರತೆ ಇದ್ದದ್ದನ್ನು ಗಮನಿಸಿ ಕ್ಷೇತ್ರಾದ್ಯಂತ 300ಕ್ಕೂ ಹೆಚ್ಚು ಕೊಠಡಿಗಳನ್ನು ಕಟ್ಟಿಸಲಾಗಿದೆ, ಈ ಬಾರಿಯೂ ನೂರು ಕೊಠಡಿಗಳು ನಿರ್ಮಾಣ ಕಾರ್ಯ ನಡೆದಿದೆ ಅದಲ್ಲದೆ ಸುಜಾತ ಮುನಿರಾಜು ಮಾಲೀಕತ್ವದ ‘ಸೂರಜ್ ಫೌಂಡೇಷನ್’ ವತಿಯಿಂದ ಶಾಲಾ ಕಾಲೇಜುಗಳಿಗೆ ಮೇಜು, ಕುರ್ಚಿ,ನೋಟ್ ಬುಕ್ ವಿತರಿಸಲಾಗುತ್ತಿದೆ ಎಂದು ಶಾಸಕ ಎಸ್ ಮುನಿರಾಜು ಅವರ ಸಾರ್ವಜನಿಕರು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಚೊಕ್ಕಸಂದ್ರ ವಾರ್ಡಿನ ಬಿಜೆಪಿ ಅಧ್ಯಕ್ಷ ರಂಜಿತ್, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಪೋಷಕರು ಮುಂತಾದವರು ಉಪಸ್ಥಿತರಿದ್ದರು.
ವರದಿ: ಅಯ್ಯಣ್ಣ ಮಾಸ್ಟರ್




