ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ ನಡೆದಿದ್ದು, ಸಹಾಯಕ ಜೈಲರ್ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ.
ಸಹಾಯಕ ಜೈಲರ್ ಜಿ.ಆರ್. ಕಾಂಬಳೆ ಮೇಲೆ ಕೈದಿ ಹಲ್ಲೆ ನಡೆಸಿದ್ದಾನೆ. ವಿಚಾರಣಾಧೀನ ಕೈದಿ ಶಾಹಿದ್ ಹಲ್ಲೆ ನಡೆಸಿದ್ದಾನೆ.ಡಿಸೆಂಬರ್ 11ರಂದು ಜೈಲಿನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಧಿವೇಶನ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿದೆ.
ಜೈಲು ಅಧಿಕಾರಿಗಳು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು ಎಂದು ಹೇಳಲಾಗಿದೆ. ಸಹಾಯಕ ಜೈಲರ್ ಕಾಂಬಳೆ ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ವೈದ್ಯರಿಂದ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಜೈಲಿನ ಮುಖ್ಯ ಅಧೀಕ್ಷಕ ಕೃಷ್ಣಮೂರ್ತಿ ದೂರು ದಾಖಲಿಸಿದ್ದಾರೆ.