Ad imageAd image

ಇಂದು ರಾಜ್ಯದಲ್ಲಿ ಪ್ರಿಯಾಂಕ್ ಗಾಂಧಿ ಮತಭೇಟೆ

Bharath Vaibhav
ಇಂದು ರಾಜ್ಯದಲ್ಲಿ ಪ್ರಿಯಾಂಕ್ ಗಾಂಧಿ ಮತಭೇಟೆ
PRIYANAKA VADRA
WhatsApp Group Join Now
Telegram Group Join Now

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಅವರು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮತಯಾಚಿಸಲಿದ್ದಾರೆ.

ಮಂಗಳವಾರ ಮಧ್ಯಾಹ್ನ ಮೂರು ಗಂಟೆಗೆ ಚಿತ್ರದುರ್ಗದಲ್ಲಿ ನಡೆಯುವ ಪ್ರಜಾಧ್ವನಿ -2 ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದು, ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚಿಸಲಿದ್ದಾರೆ.

ಸಂಜೆ 6 ಗಂಟೆಗೆ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೆಚ್.ಎಂ.ಎಸ್. ಲೇಔಟ್ ನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಪ್ರಚಾರ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!