ಹುಬ್ಬಳ್ಳಿ : ಕರ್ನಾಟಕದಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳಿದ್ದು ಯಾರು ಎಂದು ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ರಣ್‌ದೀಪ್ ಸಿಂಗ್ ಸುರ್ಜೇವಾಲಾ ಅವರು 3-4 ದಿನಗಳ ಕಾಲ ರಾಜ್ಯದಲ್ಲಿದ್ದರು.
ಶಾಸಕರು, ಸಚಿವರ ಕಾರ್ಯಕ್ಷಮತೆಯನ್ನು ಪರೀಕ್ಷಿಸಿದ್ದಾರೆ. ಹಲವರೊಂದಿಗೆ ನೇರವಾಗಿ ಚರ್ಚಿಸಿದ್ದಾರೆ. ಆದರೆ ಸಿಎಂ ಬದಲಾವಣೆಯ ಮಾತು ಎಲ್ಲೂ ಬಂದಿಲ್ಲ ಎಂದು ಹೇಳಿದರು.
ಮಾಧ್ಯಮಗಳು ಸುಖಾ ಸುಮ್ಮನೆ ಸಿಎಂ ಬದಲಾವಣೆಯ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ನುಡಿದ ಪ್ರಿಯಾಂಕ್ ಖರ್ಗೆ, ಇಂಥಾ ವಿಷಯಗಳನ್ನು ಪಕ್ಷದ ಹೈಕಮ್ಯಾಂಡ್ ನಿರ್ಧರಿಸುತ್ತದೆ. ಸಿಎಂ ಮತ್ತು ಡಿಸಿಎಂ ಕೂಡ ಇದನ್ನೇ ಹೇಳಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.




