Ad imageAd image
- Advertisement -  - Advertisement -  - Advertisement - 

ಗ್ರಾಮ ಪಂಚಾಯತಿಗಳಿಗೆ ಆರ್ಥಿಕ ಬಲಕ್ಕೆ ಕ್ರಮ : ಪ್ರಿಯಾಂಕ್ ಖರ್ಗೆ 

Bharath Vaibhav
ಗ್ರಾಮ ಪಂಚಾಯತಿಗಳಿಗೆ ಆರ್ಥಿಕ ಬಲಕ್ಕೆ ಕ್ರಮ : ಪ್ರಿಯಾಂಕ್ ಖರ್ಗೆ 
PRIYANKA KHARGE
WhatsApp Group Join Now
Telegram Group Join Now

ಬೆಂಗಳೂರು: ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಚಿಂತಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ ನಡೆಸಿದರು.

ಗ್ರಾಮ ಪಂಚಾಯತಿಗಳಿಗೆ ಸಂಪೂರ್ಣವಾಗಿ ಸ್ವತಂತ್ರವಾಗಿ ಆಡಳಿತ ನಡೆಸುವಂತೆ ಆರ್ಥಿಕ ಶಕ್ತಿ ತಂದುಕೊಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ ಸಚಿವರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪಂಚಾಯತಿ ಆಸ್ತಿಗಳ ನಕ್ಷೆ ರೂಪಿಸುವ ಮೂಲಕ ಉದ್ದೇಶಿತ ಯೋಜನೆಯನ್ನು ಸಾಕಾರಗೊಳಿಸುವಲ್ಲಿ ಕಾರ್ಯತತ್ಪರರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಾಯೋಗಿಕವಾಗಿ ಕೆಲವು ಗ್ರಾಮ ಪಂಚಾಯತಿಗಳೇ ಅಲ್ಲದೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿಗಳನ್ನು ಆರಿಸಿಕೊಂಡು ಆಸ್ತಿಗಳ ನಕ್ಷೆಕಾರ್ಯ ಕೈಗೆತ್ತಿಕೊಳ್ಳುವಂತೆ ಸಚಿವರು ಸಲಹೆ ಮಾಡಿದರು.

ಪ್ರವಾಸಿ ಕೇಂದ್ರಗಳನ್ನು ಕೇಂದ್ರೀಕರಿಸಿ ಅಂತಹ ಸ್ಥಳಗಳಲ್ಲಿ ಲಬ್ಯವಿರುವ ಪ್ರಮುಖ ಆಸ್ತಿಗಳನ್ನು ವಾಣಿಜ್ಯಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಸ್ಥಳೀಯ ಆಡಳಿತಗಳ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಬಹುದೆಂದು ಸಚಿವರು ಹೇಳಿದರು.

 

 

WhatsApp Group Join Now
Telegram Group Join Now
Share This Article
error: Content is protected !!