ಕಾಳಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ರಾಜ್ಯದಲ್ಲಿ ಉತ್ತಮ ಆಡಳಿತವು ನೀಡುತ್ತಿರೊದು ಬಿಜೆಪಿ ನಾಯಕರಿಗೆ ಸಹಿಸಿಕೊಳ್ಳೋಕೆ ಆಗುತ್ತಿಲ್ಲ, ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ, ಆತ್ಮಹತ್ಯೆಯಲ್ಲಿ ಸಚಿವರ ಯಾವುದೇ ಪಾತ್ರವಿಲ್ಲ ಮರಣ ಪತ್ರದಲ್ಲೂ ಅವರ ಹೆಸರಿಲ್ಲ ಆದರೂ ಬಿಜೆಪಿ ನಾಯಕರು ಅವರ ವಿರುದ್ಧ ಅಪಪ್ರಚಾರ ಮಾಡುತ್ತಾ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಸರಿಯಲ್ಲ.
ಪ್ರಿಯಾಂಕ್ ಖರ್ಗೆ ಅವರೇ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಕೋರಿದರು, ಆತ್ಮಹತ್ಯೆ ಪ್ರಕರಣದಲ್ಲಿ ಅವರ ಹೆಸರು ಎಳೆದು ತಂದು ವರ್ಚಸ್ಸು ಕುಗ್ಗಿಸುವ ಷಡ್ಯಂತ್ರ ಯಾವುದೇ ಕಾರಣಕ್ಕೂ ಬಿಜೆಪಿಗೆ ಸಾಧ್ಯವಿಲ್ಲ. ಎಂದು ಕಾಂಗ್ರೆಸ್ ಮುಖಂಡರು ಕಿಡಿ ಕಾರಿದರು.
ವರದಿ : ಹಣಮಂತ ಕುಡಹಳ್ಳಿ