ಚಿಕ್ಕೋಡಿ ಲೋಕಸಭೆ ನೂತನ ಸಂಸದೆಯಾಗಿ ಆಯ್ಕೆಯಾದ ಪ್ರಿಯಾಂಕ ಜಾರಕಿಹೊಳಿ ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ಪತ್ರ ಸ್ವೀಕಾರ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನವಾಗಿ ಸಂಸದೆಯಾಗಿ ಆಯ್ಕೆಯಾದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬೆಳಗಾವಿ ಜಿಲ್ಲೆಯ ಹಾಗೂ ಚಿಕ್ಕೋಡಿ ಕ್ಷೇತ್ರದ ಚುನಾವಣಾ ಅಧಿಕಾರಿಗಳಾದ ಪ್ರಶಾಂತ ಹೊನಗಂಡಿ ಪ್ರಮಾಣ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಪ್ರಕಾಶ ಹುಕ್ಕೇರಿ, ಶಾಸಕರಾದ ಗಣೇಶ ಹುಕ್ಕೇರಿ, ಆಶಿಫ್ (ರಾಜು) ಸೇಠ್, ಮಾಜಿ ಶಾಸಕರಾದ ಎಸ್. ಬಿ. ಘಾಟಗೆ, ಮಾಜಿ ಸಚಿವರಾದ ವೀರಕುಮಾರ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಲಕ್ಷ್ಮಣರಾವ ಚಿಂಗಳೆ, ಯುವ ನಾಯಕ ಹಾಗೂ ಸಹೋದರ ರಾಹುಲ್ ಜಾರಕಿಹೊಳಿ ಅವರು ಉಪಸ್ಥಿತರಿದ್ದರು.
ವರದಿ:ಮಂಜುನಾಥ ರಜಪೂತ
#priyankajarkiholi