ಚಿಂಚೋಳಿ :- ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದ ಸರಕಾರಿ ಕನ್ಯಾ ಪ್ರೌಢಶಾಲೆ ಸುಲೇಪೇಟನಲ್ಲಿ ವಿದ್ಯಾರ್ಥಿಗಳ ನಡೆ ಸಂವಿಧಾನದ ಕಡೆ ಎಂಬ ಕಾರ್ಯಕ್ರಮವನ್ನು ತಾಲೂಕು ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಆಯೋಜಿಸಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ಯಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಸುರೇಶ್ ವಾಲೀಕಾರ್ ಅವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾಗಿ ಡಾ. ಮಲ್ಲಿಕಾರ್ಜುನ ಸಾವರ್ಕರ್ ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಂಚೋಳಿ ಅತಿಥಿಗಳಾಗಿ ಸುನಿಲ್ ಸಲಗರ್,ಶ್ರೀ ಪ್ರಭು ಜಾಣ. ಸುನೀತಾ ಮೇಡಂ.ಪ್ರೇಮನಾಥ್ ದೈಹಿಕ ಶಿಕ್ಷಕರು ಶಿವಪ್ರಸಾದ್ ಶಿಕ್ಷಕರು ಕನ್ಯೆ ಪ್ರೌಢಶಾಲೆ ಕಾರ್ಯಕ್ರಮದ ಆಯೋಜಕರಾದ ಯಲ್ಲಾಲಿಂಗ ದಂಡಿನ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರು ಚಿಂಚೋಳಿ ವೈಜ್ಞಾನಿಕ ಮಿತ್ರ ಪ್ರವೀಣ್ ಟೀಟಿ ಮುಂತಾದವರು ಕಾರ್ಯಕ್ರಮದ ಕುರಿತು ವಿಶೇಷ ಉಪನ್ಯಾಸಕರಾದ ಮಲ್ಲಿಕಾರ್ಜುನ್ ಸಾವರ್ಕರ್ ಅವರು ಮಾತನಾಡಿ ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ.
ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.
ಭಾರತದ ಸಂವಿಧಾನ ಇಲ್ಲಿಯವರೆಗಿನ ಮೂಲದ ಪ್ರಕಾರ ೩೬೫ ನಂತರ ೪೬೭ ವಿಧಿಗಳು ೨೨ ನಂತರ ೨೫ ಭಾಗಗಳಲ್ಲಿಯೂ,೮ನಂತರ ೧೨ ಅನುಚ್ಛೇದಗಳನ್ನೂ, ೧೧೮ ತಿದ್ದುಪಡಿಗಳನ್ನೂ ಹೊಂದಿರುವ ಈ ಸಂವಿಧಾನ ಯಾವುದೇ ದೇಶದ ಲಿಖಿತ ಸಂವಿಧಾನಕ್ಕಿಂತ ದೀರ್ಘವಾದುದ್ದು. ಈ ಸಂವಿಧಾನದ ಆಂಗ್ಲ ಭಾಷೆಯ ಆವೃತ್ತಿಯು ೧,೧೭,೩೬೯ ಶಬ್ದಗಳನ್ನು ಹೊಂದಿದೆ. ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ.
ಅದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ ಏರ್ಪಡಿಸುತ್ತದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವುದಲ್ಲದೆ ಅವುಗಳ ಜವಾಬ್ದಾರಿಯನ್ನೂ ಖಚಿತಗೊಳಿಸುತ್ತದೆ.
ವಿಭಿನ್ನ ಅಂಗಗಳ ನಡುವಿನ ಸಂಬಂಧವನ್ನೂ ಜನತೆ ಹಾಗೂ ಸರಕಾರದ ನಡುವಿನ ಸಂಬಂಧವನ್ನೂ ನಿಯಂತ್ರಿಸುತ್ತದೆ. ಸಂವಿಧಾನವು ದೇಶದ ಎಲ್ಲ ಕಾನೂನುಗಳಿಗಿಂತ ಹೆಚ್ಚಿನ ಸ್ಥಾನವನ್ನು ಹೊಂದಿದೆ.
ಸರಕಾರವು ಮಾಡುವ ಪ್ರತಿಯೊಂದು ಕಾನೂನು ಸಂವಿಧಾನಕ್ಕೆ ಅನುಗುಣವಾಗಿರಬೇಕು. ಭಾರತದ ಸಂವಿಧಾನವು ದೇಶದ ಗುರಿಗಳು -ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಸಮಗ್ರತೆ ಎಂದು ಸ್ಪಷ್ಟಪಡಿಸುತ್ತದೆ.ಅದು ಪ್ರಜೆಗಳ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಖಚಿತವಾಗಿ ವಿಧಿಸುತ್ತದೆ.ಸಂವಿಧಾನವು ೩೭೦ನೇ ವಿಧಿ ಮತ್ತು ಸಂವಿಧಾನ ಆಜ್ಞೆ ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ ಕುರಿತು
೯೧೫೪ ರಲ್ಲಿ ಒದಗಿಸಲಾದ ಕೆಲವು ಅಪವಾದಗಳು ಮತ್ತು ಬದಲಾವಣೆಗೊಳಪಟ್ಟಿದೆ ಹೇಳಿದರು
ವರದಿ:- ಸುನಿಲ್ ಸಲಗರ