ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯನ್ನು ಮುಗಿಸಿಕೊಂಡು ಪಾವಗಡ ತಾಲೂಕಿನಲ್ಲಿರುವ
ಬ್ಯಾಡನೂರು ಗ್ರಾಮ ಪಂಚಾಯ್ತಿಗೆ ನರೇಗಾ ಕಾಮಗಾರಿಗಳನ್ನು ಪರಿಶೀಲಿಸುವುದಕ್ಕೆ ದಿನಾಂಕ 30/12/2024 ರಂದು ಸೋಮವಾರ 5 ಗಂಟೆಯ ಸಮಯದಲ್ಲಿ ಸಿ ಇ ಓ ಪ್ರಭು.ಜಿ ಭೇಟಿ ನೀಡಿರುತ್ತಾರೆ.
ಇದೇ ಸಂದರ್ಭದಲ್ಲಿ ಬ್ಯಾಡನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅನುಷ್ಠಾನವಾಗಿರುವ ಜಲ ಜೀವನ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ಮುಖ್ಯ ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಭು.ಜೀ ಇದೇ ವೇಳೆ ಮಾತನಾಡಿ ಅವರು ಕಳಪೆ ಕಾಮಗಾರಿ ಮಾಡದ ಹಾಗೂ ಕಾಮಗಾರಿಯಲ್ಲಿ ಗುಣಮಟ್ಟದ ಕೊರತೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ ಈ ಸಂದರ್ಭದಲ್ಲಿ ವಿವಿಧ ತಾಲ್ಲೂಕ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ಶಿವಾನಂದ