ಬೆಳಗಾವಿ :ಕರ್ನಾಟಕ ಪ್ರವರ್ಗ1ರ ಜಾತಿಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಶಾಸಕರಾದ ಡಿ.ಟಿ. ಶ್ರೀನಿವಾಸ್ ಅವರು ಪ್ರವರ್ಗ 1ಜಾತಿಗಳ ಹಾಗೂ ಅಲೆಮಾರಿ ಅರೆಅಲೆಮಾರಿ ಜನಾಂಗಗಳ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಹಾಗೂ ವಿಶ್ವವಿದ್ಯಾಲಯಗಳಲ್ಲಿಯು ಮೀಸಲಾತಿಗಳಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತು ವಿದ್ಯಾ ಸಂಸ್ಥೆಗಳು ಹೆಚ್ಚುತ್ತಿದ್ದು, ಹಾಸ್ಟೆಲ್ಗಳು ಅದೇ ಸಂಖ್ಯೆಯಲ್ಲಿರುವುದರಿಂದ ಅಸಮತೋಲನದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಆದ್ದರಿಂದ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಬಿಸಲು ಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆದರು.
ವರದಿ: ರಾಜು ಮುಂಡೆ