ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಕೋರಿ ಭಾನುವಾರವೇ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.ಪ್ರಾಸಿಕ್ಯೂಷನ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಕಾನೂನಾತ್ಮಕವಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಕಪಿಲ್ ಸೇಲ್ ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸೇರಿದಂತೆ ಪ್ರಮುಖರೊಂದಿಗೆ ಚರ್ಚೆ ನಡೆಸಿ ಅರ್ಜಿ ಹೈಕೋರ್ಟ್ ಗೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.