ಬಳ್ಳಾರಿ:ನಾಲ್ಕು ಸಾರಿಗೆ ನಿಯಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15 ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ನಗರದ ಗಡಿಗಿ ಚೆನ್ನಪ್ಪ ಸರ್ಕಲ್ನಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಡೀಸೆಲ್ ದರಗಳು ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ ಹೆಚ್ಚಳದ ನೆಪದಲ್ಲಿ ದರ ಏರಿಕೆ ಮಾಡಿರುವುದು ಪ್ರಜಾಸತ್ತಾತ್ಮಕ ಮತ್ತು ಅವೈಜ್ಞಾನಿಕವಾಗದೆ,ಮೇಲಾಗಿ ಸಾಮಾನ್ಯ ಜನರ ವಿರೋಧಿಯಾಗಿದೆ. ಡೀಸೆಲ್ ಹೆಚ್ಚಳವಾಗದೆ ಎನ್ನುವ ಸರ್ಕಾರ ಡೀಸೆಲ್ ದರ ಇಳಿದಾಗ ದರಗಳನ್ನು ಎಂದಾದರೂ ಕಡಿಮೆ ಮಾಡಿದಿಯೇ …..? ವಿಪರ್ಯಾಸವೆಂದರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ ದರವೂ ಮುಕ್ತ ಮಾರುಕಟ್ಟೆ ದರಗಳಿಗಿಂತ ದುಬಾರಿಯಾಗಿದೆ.
ಸರ್ಕಾರಕ್ಕೆ ನಿಜಕ್ಕೂ ವೆಚ್ಚವನ್ನು ಕಡಿಮೆ ಮಾಡಬೇಕೆಂದಿದ್ದಾರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ ದರವನ್ನು ಸಬ್ಸಿಡಿ ದರದಲ್ಲಿ ಪೂರೈಸಬೇಕು ಇಲ್ಲವೇ ಮುಕ್ತ ಮಾರುಕಟ್ಟೆ ದರಗಳಲ್ಲಾದರೂ ಪೂರೈಸಬೇಕು.ಅದನ್ನು ಬಿಟ್ಟು ಶೇಕಡಾ 15 ರ ದರ ಹೆಚ್ಚಿಸಿ ಪ್ರಯಾಣಿಕರಿಗೆ ಭರೆಹಾಕುವುದು ಎಷ್ಟು ಸಮಂಜಸ ಎಂದು ಪ್ರತಿಭಟನರಕಾರರು ಆಕ್ರೋಸ ವ್ಯಕ್ತಪಡಿಸಿದ್ರು.