Ad imageAd image
- Advertisement -  - Advertisement -  - Advertisement - 

ವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ ಮತ್ತು ಮನವಿ

Bharath Vaibhav
ವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ ಮತ್ತು ಮನವಿ
WhatsApp Group Join Now
Telegram Group Join Now

ರಾಮದುರ್ಗ:- ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಿಂದ ರಾಮದುರ್ಗ ಮಿನಿ ವಿಧಾನಸಭಾವರೆಗೆ ಅತ್ಯಾಚಾರ ಮತ್ತು ಹತ್ಯೆಗೊಳಗಾದ ವೈದ್ಯೆಗೆ ನ್ಯಾಯ ಒದಗಿಸಲು ಆಗ್ರಹಿಸಿ ರಾಮದುರ್ಗ ಸರಕಾರಿ ಮತ್ತು ಖಾಸಗಿ ವೈದ್ಯರು ಪ್ರತಿಭಟನೆ ಮೆರವಣಿಗೆ ನಡೆಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ತಾಲೂಕಾ ದಂಡಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

 

ಕೋಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತು ಪಡಿಸಿ,ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು 17-08-2024 ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ನೀಡಿ ಪ್ರತಿಭಟಸಿದರು.

ವೈದ್ಯಾಧಿಕಾರಿಗಳು ದಿನದ 247 ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಹಾಗೂ ಕೋವಿಡ್-19 ಅಂತಹ ಸಾಂಕ್ರಾಮಿಕ ರೋಗವು ಇಡೀ ಪ್ರಪಂಚವನ್ನೇ ಭಾಧಿಸಿದ ಸಂಧರ್ಭದಲ್ಲಿ ವೈದ್ಯರು ಹಗಲು ರಾತ್ರಿ ಎನ್ನದೇ ತಮ್ಮ ಪ್ರಾಣವನ್ನೆ ಪಣಕ್ಕಿಟ್ಟು ಶ್ರಮವೈಸಿರುತ್ತಾರೆ.

ಆದರೆ ದಿ:-09.08.2024 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯವರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ವೈದ್ಯ ಸಮೂಹಕ್ಕೆ ಮಾಡಿದ ಘೋರ ಅಪರಾಧವಾಗಿದ್ದು ,ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರುಗಳ ಮನೋಸೈರ್ಯ ಕುಗ್ಗುವಂತೆ ಮಾಡಿದ್ದು. ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭಿರವಾಗಿ ಖಂಡಿಸಿದರು

ಈ ಸಂಧರ್ಭದಲ್ಲಿ ತಾಲೂಕಿನ ಮುಖ್ಯ ವೈದ್ಯಾಧಿಕಾರಿಗಳಾದ ಡಾ./ ನವೀನ್ ನಿಜಗುಲಿ, ಡಾ॥ ವರುಣ ಬೀಳಗಿ, ಡಾ, ಕಂಬಿ ಮೇಡಮ್ ಮತ್ತು ಈ ಪ್ರತಿಭಟನೆಯಲ್ಲಿ ಸರಕಾರಿ ಹಾಗೂ ಖಾಸಗಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕಲಾದಗಿ 

WhatsApp Group Join Now
Telegram Group Join Now
Share This Article
error: Content is protected !!