ಕಲಬುರಗಿ: ಬಿಜೆಪಿ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಗತ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಜಗತ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ವಾಹನಗಳ ಸಂಚಾರ ತಡೆದು ಟೈಗಳಿಗೆ ಬೆಂಕಿ ಹಚ್ಚಿದರು. ಪೊಲೀಸ್, ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಹೊಡಬೇಕು ಎಂದು ಆಗ್ರಹಿಸಿದರು. ಬೀದರ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರು ತಮ್ಮ ಡೆಪ್‌ನೋಟ್‌ನಲ್ಲಿ ಆಂದೋಲಾ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮರು, ಬಿಜೆಪಿ ಮುಖಂಡರಾದ ಒಂದು ಪಾಟೀಲ, ಮಣಿಕಂಠ ದಾರಡ ಹತ್ಯೆಗೆ ಕಾಂಗ್ರೆಸ್ ಮುಖಂಡರಾದ ರಾಜು ಕಪನೂರ, ನಂದಕುಮಾರ ನಾಗಭುಜಂಗೆ, ಗೋರಕವಾಥ ಸಜ್ಜನ, ಪ್ರತಾಪಧೀರ ಪಾಟೀಲ, ಮನೋಜ ಶ ಜೆವಾಲ, ರಾಮನಗೌಡ ಪಾಟೀಲ ಎಂಬುವವರು ಸಂಚು ರೂಪಿಸಿದ್ದಾರೆ ಎಂದು ಬರೆದಿದ್ದಾರೆ. ಹತ್ಯೆಗೆ ಸಂಚು ರೂಪಿಸಿದವರ ವಿರುದ್ಧ ದೂರು ಕೊಡಲು ಹೋದಾಗ ಸ್ಟೇಷನ್ ಬಜಾರ್
ಠಾಣೆಯ ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.