Ad imageAd image

ದ್ವೇಷ ಭಾಷಣ ಮಸೂದೆ ಜಾರಿಗೊಳಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ.

Bharath Vaibhav
ದ್ವೇಷ ಭಾಷಣ ಮಸೂದೆ ಜಾರಿಗೊಳಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ.
WhatsApp Group Join Now
Telegram Group Join Now

ಗೋಕಾಕ : ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು
ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರೋದಿಸಿ ಗೋಕಾಕದಲ್ಲಿ ಬಿಜೆಪಿ ನಗರ ಘಟಕದ ಅದ್ಯಕ್ಷ ಭಿಮಶಿ ಭರಮನ್ನವರ ಮತ್ತು ಗ್ರಾಮೀಣ ಘಟಕದ ಅದ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಇವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನ್ಯಾಯವಾದಿ ದೇಮಶೆಟ್ಟಿ ಇವರು ಮಾತನಾಡಿ ಈ ಪ್ರತಿಬಂಧಕ ವಿಧೇಯಕ ಸಂವಿಧಾನಕ್ಕೆ ವಿರುದ್ಧವಾಗಿದ್ದು ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ
ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದು ಬಿಜೆಪಿ ಒತ್ತಾಯಿಸುತ್ತದೆ.

ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಇದು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನ ತೂಗುಗತ್ತಿ ಎದುರಿಸಬೇಕಾಗುತ್ತದೆ.

ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು; ಕಾನೂನು ಕ್ರಮ ಕೈಗೊಳ್ಳಬಹುದು. ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಅಭಿವ್ಯಕ್ತಿಯನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ.

ಹೀಗಾಗಿ ಇದನ್ನು ಜಾರಿಯಾಗಲು ಅವಕಾಶ ನೀಡಕೂಡದು ಎಂದು ತಹಸಿಲ್ದಾರರಿಗೆ ಮನವಿ ನೀಡಿದರು.

ಈ ಸಂದರ್ಬದಲ್ಲಿ ಗೋಕಾಕ ಮತ್ತು ಗ್ರಾಮೀಣ ಬಾಗದ ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದು ಕಾಂಗ್ರೆಸ್ ಸರಕಾರದ ವಿರುದ್ದ ದಿಕ್ಕಾರ ಕೂಗಿದರು.

ವರದಿ  : ಮನೋಹರ ಮೇಗೇರಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!