Ad imageAd image

ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಕೊಲೆ ಖಂಡಿಸಿ ,ವೈದ್ಯರಿಂದ , ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ.

Bharath Vaibhav
ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಕೊಲೆ ಖಂಡಿಸಿ ,ವೈದ್ಯರಿಂದ , ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ.
WhatsApp Group Join Now
Telegram Group Join Now

ಚಿಕ್ಕೋಡಿ:- ಪಟ್ಟಣದಲ್ಲಿ ಭಾರತೀಯ ವೈದ್ಯಕೀಯ ಸಂಘದವತಿಯಿಂದ ಕಪ್ಪುಬಟ್ಟೆ ಧರಿಸಿ ಈ ಪ್ರತಿಭಟನೆಯನ್ನು  ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಚಿಕ್ಕೋಡಿ ಪಟ್ಟಣದ ಹಾಗೂ ತಾಲೂಕಿನ ವೈದ್ಯರ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು ಪ್ರತಿಭಟನೆ ರ್ಯಾಲಿಯಲ್ಲಿ ಸಾರ್ವಜನಿಕ ಆಸ್ಪತ್ರೆಯಿಂದ ಪ್ರಾರಂಭವಾಗಿ ರಾಣಿ ಚೆನ್ನಮ್ಮ ರಸ್ತೆ ಮೂಲಕ ಸಂಚರಿಸಿ ಬಸವ ಸರ್ ವೃತ್ತಕ್ಕೆ ತಲುಪಿ ಅಲ್ಲಿ ಮಾನವ ಸರಪಳಿ ನಿರ್ಮಿಸಿ ಉಗ್ರವಾದ ಪ್ರತಿಭಟನೆ ಮಾಡಲಾಯಿತು.

ಕೊಲಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು ಬಳಿಕ ಉಪವಿಭಾಗಅಧಿಕಾರಿ ಸುಭಾಸ ಸಂಪಗಾವಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ರ್ಯಾಲಿಯ ಸಂದರ್ಭದಲ್ಲಿ ವೈದ್ಯರು ಮಾತನಾಡಿ ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಮಾಡಿ ಕೊಲೆ ಮಾಡಿರುವ ಘಟನೆ ಯು ನಾಗರಿಕರ ಸಮಾಜವು ತಲೆತಗ್ಗುವಂತೆ ಮಾಡಿದೆ ಈ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು ಅಂದಾಗ ಮಾತ್ರ ಇಂತಹ ಪ್ರಕರಣಗಳು ತಡೆಯಲು ಸಾಧ್ಯ ಎಂದು ಹೇಳಿದರು.

ವರದಿ :-ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!