ಚಾಮರಾಜನಗರ :- ಗುಂಡ್ಲುಪೇಟೆ ತಾಲೂಕಿನ ಗುರುವಿನಪುರ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಶುಕ್ರವಾರ ಮಧ್ಯಾಹ್ನ 12.30 ರಲ್ಲಿ ಚಾಮರಾಜನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಹಾಗೂ ರೈತರು ಪ್ರತಿಭಟನೆ ನಡೆಸಿದರು.
ಸಂಘದ ರಾಜ್ಯಾಧ್ಯಕ್ಷರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಗುರುವಿನಪುರಕ್ಕೆ ಬಸ್ ವ್ಯವಸ್ಥೆ ಇಲ್ಲದೇ ವೃದ್ಧರು, ಮಹಿಳೆಯರು , ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ರೈತರಿಗೆ ತೊಂದರೆ ಉಂಟಾಗಿದೆ.
ಸುಮಾರು ಎರಡು ಕಿಲೋಮೀಟರ್ ನಡೆದು ದೇವಲಾಪುರ ಗ್ರಾಮಕ್ಕೆ ತೆರಳಬೇಕು ಅದ್ದರಿಂದ ಗುರುವಿನಪುರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಪ್ರತಿಭಟನೆ ನಡೆಸಿದರು.
ವರದಿ : ಸ್ವಾಮಿ ಬಳೇಪೇಟೆ