ಮೊಳಕಾಲ್ಮುರು: ಬೆಳಗಾವಿಯಲ್ಲಿ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ಲಾಟಿಚಾರ್ಜ್ ಮಾಡಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸಂಘದ ತಾಲೂಕು ತಾಲೂಕು ಅಧ್ಯಕ್ಷರಾದ ಆರ್ ಜಿ ಜಯಕುಮಾರ್ ಇವರು ಮಾತನಾಡಿ,
ಸಂವಿಧಾನಾತ್ಮಕವಾಗಿ ಕಾನೂನು ಚೌಕಟ್ಟಿನಲ್ಲಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡಬೇಕು ಲಾಟಿಚಾರ್ಜ್ ಮಾಡಿರುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಗೊಳಿಸಬೇಕು ಮತ್ತು ಬಂಧಿಸಿರುವ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅಗ್ರಹಿಸಿದರು.
ಹೋರಾಟದಲ್ಲಿ ಸಂಘದ ತಾಲೂಕು ಗೌರವಾಧ್ಯಕ್ಷರಾದ ಚಂದ್ರಶೇಖರ್ ಗೌಡ ಮಾತನಾಡಿ,
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು.
ಲಾಠಿಚಾರ್ಜ್ ಮಾಡಿರುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು.
ಬೆಳಗಾವಿಯಲ್ಲಿ ಬಂಧಿಸಿರುವ ಪಂಚಮಸಾಲಿ ಸಮಾಜದ ಹೋರಾಟಗಾರರನ್ನು ಕೂಡಲೇ ಷರತ್ತು ರಹಿತವಾಗಿ ಬಿಡುಗಡೆಗೊಳಿಸಬೇಕು.
ವೀರಶೈವ ಲಿಂಗಾಯತ ಸಮಾಜವನ್ನು ಕೇಂದ್ರದಲ್ಲಿ ಒಬಿಸಿಗೆ ಸೇರಿಸುವಂತೆ ಶಿಫಾರಸ್ಸು ಮಾಡಬೇಕು ನಮ್ಮ ಸಮಾಜವನ್ನು ಕೆಣಕಿದರೆ ನಾವು ಸುಮ್ಮನಿರುವುದಿಲ್ಲ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು .
ಈ ಸಂದರ್ಭದಲ್ಲಿ ಮುಖಂಡರಾದ ರಾಂಪುರ ನಾಗರಾಜ, ಅಮಕುಂದಿ ಪ್ರಭಾಕರ್, ನಾಗಸಮುದ್ರ ಸುಧಾಕರ್, ಪಂಚಮಸಾಲಿ ತಾಲೂಕು ಯುವ ಘಟಕ ಅಧ್ಯಕ್ಷರಾದ ವಿನಯ್ ಕುಮಾರ್ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್,ರಮೇಶ್, ಮೃತ್ಯುಂಜಯ,ಆರ್ಕರ್ ಗಂಗಾಧರ, ಬಳೆ ಗಂಗಾಧರ,ಹೊಸಹಳ್ಳಿ ಹರೀಶ್,ಜೆಬಿ ಹಳ್ಳಿ ಮಹೇಶ್ ಮತ್ತು ಸಮಾಜದ ಮುಖಂಡರು ಇದ್ದರು.
ವರದಿ: ಪಿಎಂ ಗಂಗಾಧರ