ಹುಮನಾಬಾದ: ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆಯ ವತಿಯಿಂದ ನಾಳೆ ಸೆಪ್ಟೆಂಬರ್ 22ರಿಂದ ಪಟ್ಟಣದಲ್ಲಿರುವ ಕಾರ್ಮಿಕ ಇಲಾಖೆ ಕಛೇರಿ ಎದರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಮಾಳಗೆ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಮಾಧ್ಯಮ ಜೊತೆಗೆ ಮಾತನಾಡಿದ ಅವರು,ಸರ್ಕಾರ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹೀಗಾಗಿ ತಾಲ್ಲೂಕಿನಲ್ಲಿರುವ ಎಲ್ಲ ಕಟ್ಟದ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.
ಚಿಟಗುಪ್ಪ ತಾಲ್ಲೂಕಿನ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶ್ರೀಮಂತ ಮೇತ್ರೆ, ಸಂಘಟನೆಯವರಾದ ಶಶಿಕಾಂತ ಡಾ0ಗೆ, ಹಾಗೂ ಗೌಸೋದ್ದಿನ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾರ್ಮಿಕರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಂಜಯ್ಯ ಮತ್ತು ವಿಜಯಕುಮಾರ ಇದ್ದರು.




