Join The Telegram | Join The WhatsApp |
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಗ್ರೇಡ್-1) (ಸಿವಿಲ್) – 600+60 (ಹೈ.ಕ) ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in/Lists ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು -01 ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕು. ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗವುದಿಲ್ಲವೆಂದು ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join The Telegram | Join The WhatsApp |