Ad imageAd image

ಏ. 7ರಂದು ಪಿಯು ಫಲಿತಾಂಶ, ಏಪ್ರಿಲ್ 24ಕ್ಕೆ ಎಸ್‌ಎಸ್‌ಎಲ್ ಸಿ ಫಲಿತಾಂಶ

Bharath Vaibhav
ಏ. 7ರಂದು ಪಿಯು ಫಲಿತಾಂಶ, ಏಪ್ರಿಲ್ 24ಕ್ಕೆ ಎಸ್‌ಎಸ್‌ಎಲ್ ಸಿ ಫಲಿತಾಂಶ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ (ಪರೀಕ್ಷೆ-1) ಫಲಿತಾಂಶವು ಇದೇ ಏಪ್ರಿಲ್ 7, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ.

ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮೊದಲ ವಾರದಲ್ಲೇ ಫಲಿತಾಂಶ ನೀಡಲು ಕೆಎಸ್‌ಇಎಬಿ (KSEAB) ಸಿದ್ಧತೆ ನಡೆಸಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಶಿಕ್ಷಣ ಇಲಾಖೆ ಪ್ರಕಟಿಸಿರುವ ಸಂಭಾವ್ಯ ದಿನಾಂಕ ಏ. 7ಕ್ಕೆ ಫಲಿತಾಂಶ ಹೊರಬರುವ ಸಾಧ್ಯತೆ ಇದೆ.

ಫೆ. 28ರಿಂದ ಮಾ. 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಈ ಬಾರಿ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು, ಮಾ. 20ರಿಂದ ಮೌಲ್ಯಮಾಪನ ಆರಂಭವಾಗಿತ್ತು. ಅದೇ ರೀತಿ ಏಪ್ರಿಲ್ 24ಕ್ಕೆ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

ಫಲಿತಾಂಶದ ದಿನಾಂಕ: ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ.:

ಈಗಾಗಲೇ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಈ ವರ್ಷದ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದವು.ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ವೀಕ್ಷಣೆ: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಆದ karresults.nic.in ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

SSLC ಫಲಿತಾಂಶ : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ (SSLC) ಪರೀಕ್ಷೆಯ ಫಲಿತಾಂಶವು ಏಪ್ರಿಲ್ 24, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆದಿದ್ದ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ವೇಗವಾಗಿ ನಡೆಯುತ್ತಿದ್ದು, ಏಪ್ರಿಲ್ ನಾಲ್ಕನೇ ವಾರದಲ್ಲಿ ಅಧಿಕೃತವಾಗಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

ವಿದ್ಯಾರ್ಥಿಗಳೇ ಗಮನಿಸಿ : ಇದು ಶಿಕ್ಷಣ ಇಲಾಖೆ ನೀಡಿರುವ ಸಂಭಾವ್ಯ (Tentative) ದಿನಾಂಕವಾಗಿದ್ದು, ಅಧಿಕೃತ ಪ್ರಕಟಣೆಗಾಗಿ ಇಲಾಖೆಯ ವೆಬ್‌ಸೈಟ್ ಗಮನಿಸುತ್ತಿರಿ. ಶುಭವಾಗಲಿ!

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!