ಬೆಂಗಳೂರು: ನಗರದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ನಡೆದಿದೆ. 1,100 ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ.
ಕ್ರಿಮಿನಲ್ ಕೇಸ್ ನಲ್ಲಿ ಆಕ್ಷೇಪಣೆ ಸಲ್ಲಿಸಲು ಲಂಚಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಲತಾ ಬೇಡಿಕೆ ಇಟ್ಟಿದ್ದರಂತೆ. ಎ.ರಾಜಾ ಎಂಬುವರಿದೆ 1,100 ಲಂಚಕ್ಕೆ ಬೇಡಿಕೆಯನ್ನು ಪಿಪಿ ಲತಾ ಇಟ್ಟಿದ್ದರಂತೆ. ಈ ಸಂಬಂಧ ರಾಜಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಇಂದು ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯದ ಪಿಪಿ ಲತಾ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.




