Ad imageAd image

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನದಿ ನೀರು ಏರಿಕೆ ಮುಂಜಾಗ್ರತೆ ಕ್ರಮ ಕುರಿತು ಮಹತ್ವದ ಸಭೆ.

Bharath Vaibhav
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನದಿ ನೀರು ಏರಿಕೆ ಮುಂಜಾಗ್ರತೆ ಕ್ರಮ ಕುರಿತು ಮಹತ್ವದ ಸಭೆ.
WhatsApp Group Join Now
Telegram Group Join Now

ಬೆಳಗಾವಿ:ಇವತ್ತು ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್  ಜಾರಕಿಹೊಳಿ ಅವರು ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿನ ವ್ಯಾಪಕ ಮಳೆ , ಅತಿವೃಷ್ಟಿ ಹಾಗೂ ಪ್ರವಾಹ ಕುರಿತು ಪ್ರಸ್ತುತದ ಸ್ಥಿತಿಗತಿ ಹಾಗೂ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.ಜಿಲ್ಲೆಯಲ್ಲಿ ಸದ್ಯದ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲವಾದರೂ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯಲ್ಲಿ ಸಜ್ಜಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸೇರಿದಂತೆ ವಿವಿಧ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ಈ ವೇಳೆ ಜಿಲ್ಲಾ ಪಂಚಾಯತಿಯ ನವೀಕರಿಸಲಾದ ಸಭಾಭವನವನ್ನು ಉದ್ಘಾಟಿಸಿ ಪರಿಶೀಲಿಸಿದರು.

ವರದಿ :ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!