Ad imageAd image

ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Bharath Vaibhav
ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
WhatsApp Group Join Now
Telegram Group Join Now

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಲಿದ್ದಾರೆ.

ಮಲ್ಲೇಶ್ವರಂನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12:30 ಕ್ಕೆ ಸಚಿವರು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ಕ್ಕೆ ವಿದ್ಯಾರ್ಥಿಗಳು https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಮಾರ್ಚ್ 1 ರಿಂದ 20ರವರೆಗೆ ರಾಜ್ಯದ 1771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯುಸಿ ಪರೀಕ್ಷೆಗೆ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದರು. ಏಪ್ರಿಲ್ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿದ್ದು, ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.

 

 

WhatsApp Group Join Now
Telegram Group Join Now
Share This Article
error: Content is protected !!