Ad imageAd image

18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

Bharath Vaibhav
18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 
laxmi hebbalkar
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರ ಬಾಲ್ಯವಿವಾಹ ತಡೆಗೆ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು ಕೊಳ್ಳಬೇಕು ಎಂದು ಕರೆ ನೀಡಿದರು.

ಮಕ್ಕಳ ಪಾಲಿಗೆ ಮೊಬೈಲ್ ಎಂಬುದು ಸಾಮಾಜಿಕ ಪೀಡುಗಾಗಿದೆ. ಅದು ಕೇವಲ ಶಿಕ್ಷಕರ ಹೊಣೆಯಲ್ಲ. ಮನೆಯಲ್ಲಿ ಪಾಲಕರು ಮಕ್ಕಳು ಮೊಬೈಲ್ ಬಳಸದಂತೆ ನಿಗಾವಹಿಸಬೇಕು. ಮೊಬೈಲ್ ನಿಂದ ಮಕ್ಕಳು ದೂರ ಇದ್ದಷ್ಟೂ ಎತ್ತರಕ್ಕೆ ಬೆಳೆಯುತ್ತಾರೆ ಎಂದರು.

ಕರ್ನಾಟಕದ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಹೋರಾಟವನ್ನೇ ಮಾಡುತ್ತಿದೆ. 1999ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಯೋಜನೆಯನ್ನು ಜಾರಿಗೆ ತಂದರು. ಬಳಿಕ 2013 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಶಾಲಾ‌ ಮಕ್ಕಳಿಗೆ ಮೊಟ್ಟೆ ಹಾಗೂ ಹಾಲು ನೀಡಲಾಗುತ್ತಿದೆ ಎಂದರು.

ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ‌ ಕಠಿಣ ಕ್ರಮಕೈಗೊಳ್ಳಲಿದೆ. 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ ‌ 25 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಹೇಳಿದರು. ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗಾಗಿಯೇ ಅಕ್ಕ ಪಡೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!