ಲಕ್ನೋ: ಲಕ್ನೋ ಸೂಪರ್ ಗೇಂಟ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಇಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ 171 ರನ್ ಗಳಿಸಿದ್ದು, ಎದುರಾಳಿ ಪಂಜಾಬ್ ಕಿಂಗ್ಸ್ ಗೆ 172 ರನ್ ಗಳ ಗೆಲುವಿನ ಗುರಿ ನೀಡಿದೆ.
ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಿಕೋಲಸ್ ಪೋರನ್ ಉಪಯುಕ್ತ 44 ರನ್ ಗಳು (30 ಎಸೆತ, 5 ಬೌಂಡರಿ, 2 ಸಿಕ್ಸರ್) ಬದೋನಿ 41 (33 ಎಸೆತ, 1 ಬೌಂಡರಿ, 3 ) ಹಾಗೂ ಅಬ್ದುಲ್ ಸಾಮದ 11 ಎಸೆತಗಳಲ್ಲಿ 27 ರನ್ ಗಳಿಸಿ ತಂಡಕ್ಕೆ ನೆರವಾದರು.