ಜೈಪುರ: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯ ಮೊದಲ ಪ್ಲೇ ಆಪ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಗೆ 184 ರನ್ ಗಳನ್ನು ಗಳಿಸಿದ್ದು, ಪಂಜಾಬ್ ಕಿಂಗ್ಸ್ ಗೆ 185 ರನ್ ಗಳ ಗೆಲುವಿನ ಗುರಿ ನೀಡಿದೆ.
ಸ್ವಾಮಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರಿಂದ ಬ್ಯಾಟ್ ಮಾಡಲು ಇಳಿದ ಮುಂಬೈ ಇಂಡಿಯನ್ಸ್ ಪರವಾಗಿ ಸೂರ್ಯಕುಮಾರ ಯಾದವ್ ಮತ್ತೊಂದು ಬಿರುಸಿನ ಅರ್ಧ ಶತಕ ಗಳಿಸಿ ತಂಡದ ಉತ್ತಮ ಮೊತ್ತಕ್ಕೆ ಕಾರಣವಾದರು.




