ಧರ್ಮಶಾಲಾ: ಪಂಜಾಬ್ ಕಿಂಗ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳು ಇಂದು ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 58 ನೇ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಪಂದ್ಯಾವಳಿಯಲ್ಲಿ ತಮ್ಮ ಹಿಡಿತವನ್ನು ಮುಂದುವರೆಸಲು ಎರಡೂ ತಂಡಗಳಿಗೂ ಈ ಪಂದ್ಯ ಮಹತ್ವದ ಪಂದ್ಯವಾಗಿದೆ. ಅದರಲ್ಲೂ ದೆಹಲಿ ಕ್ಯಾಪಿಟಲ್ಸ್ ಗೆ ಇನ್ನು ಮಹತ್ವದ ಪಂದ್ಯವಾಗಿದೆ. ಪಂಜಾಬ್ ಕಿಂಗ್ಸ್ ತಂಡ 11 ಪಂದ್ಯಗಳನ್ನು ಆಡಿದ್ದು, 7 ರಲ್ಲಿ ಗೆಲುವು, ಒಂದು ಪಂದ್ಯ ಅನಿರ್ನಿ ಒಟ್ಟು 15 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತ ದೆಹಲಿ ಕ್ಯಾಪಿಟಲ್ಸ್ ತಂಡ 11 ಪಂದ್ಯಗಳಿಂದ 6 ರಲ್ಲಿ ಗೆದ್ದು 13 ಅಂಕಗಳೊಂದಿಗೆ 5 ನೇ ಸ್ಥಾನದಲ್ಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.




