ಬೆಂಗಳೂರು : ರಾಜ್ಯ ಸರ್ಕಾರದ ಬಳಿ ನಯಾಪೈಸೆ ಇಲ್ಲ. ಗಂಡನ ಜೇಬಿಗೆ ಕತ್ತರಿ ಹಾಕಿ ಹೆಣ್ಣು ಮಕ್ಕಳಿಗೆ ಹಣ ನೀಡುತ್ತಿದ್ದಾರೆ. ಕಾಂಗ್ರೆಸ್ನವರು ಮನೆ ಹಾಳು ಮಾಡುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ಪಾಪರ್ ಆಗಿದೆ ರಾಜ ಸರ್ಕಾರದ ಬಳಿ ನಯಾಪೈಸೆ ಇಲ್ಲವೆಂದು ಆರ್ ಅಶೋಕ್ ಕಿಡಿಕಾರಿದರು.
ಲೋಕಸಭಾ ಚುನಾವಣೆಯಲ್ಲಿ ಡಾಕ್ಟರ್ ಕೆ ಸುಧಾಕರ್ ಗೆಲುವು ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ನೆಲಮಂಗಲ ಬರುತ್ತದೆ ಹೀಗಾಗಿ ಇಂದು ಅಲ್ಲಿ ಅಭಿನಂದನ ಕಾರ್ಯಕ್ರಮ ಏರ್ಪಡಿಸಿದ್ದರು.
ದಲಿತರ ಹಣ ಲೂಟಿ ಮಾಡಿದ್ದಾರೆ. ಮೈಸೂರಲ್ಲಿ ಮೂಡ ಸೈಟ್ ಕಬಳಿಕೆ ಮಾಡಿದ್ದಾರೆ. ಈಗ ವಿಧಾನಸಭೆ ಚುನಾವಣೆ ನಡೆದರು.ಬಿಜೆಪಿ ಜೆಡಿಎಸ್ ಮೈತ್ರಿಗೆ ಗೆಲುವಾಗಲಿದೆ.
ಶಾಸಕರು ಅಭಿವೃದ್ಧಿಯ ಹಣಕ್ಕೆ ಸಚಿವರ ಕೊರಳಪಟ್ಟಿ ಹಿಡಿಯುವ ಸ್ಥಿತಿ ಬಂದಿದೆ.ಇಂಧನ ಕಂದಾಯ ಆಸ್ತಿ ತೆರಿಗೆ ಹೆಚ್ಚಿಸಿ ಜನರ ಜೀವ ಹಿಂಡುತ್ತಿದ್ದಾರೆ ಎಂದು ಅಭಿನಂದನಾ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು