ಚಂದಿಗಢ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಮತ್ತೊಂದು ಲೀಗ್ ಪಂದ್ಯದಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾದ ಪಂಜಾಬ್ ಕಿಂಗ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಸುಧಾರಣೆ ಕಂಡಿತು.
ಇಲ್ಲಿನ ಮಹಾರಾಜ ಯಧುವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 6 ವಿಕೆಟ್ ಗೆ 157 ರನ್ ಗಳನ್ನು ಮಾತ್ರ ಗಳಿಸಿತು. ಪ್ರತಿಯಾಗಿ ಆಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 18.5 ಓವರುಗಳಲ್ಲಿ 3 ವಿಕೆಟ್ ಗೆ 159 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಈ ಗೆಲುವಿನೊಂದಿಗೆ 10 ಅಂಕ ಸಂಪಾದಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ರನ್ ಸರಾಸರಿ ಆಧಾರದ ಮೇಲೆ ಮೂರನೇ ಸ್ಥಾನ ಪಡೆದರೆ, ಇಷ್ಟೇ ಅಂಕ ಗಳಿಸಿದ ಪಂಜಾಬ್ ಕಿಂಗ್ಸ್ ನಾಲ್ಕನೇ ಸ್ಥಾನಕ್ಕೆ ಕುಸಿಯಿತು.
ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ