ಗುವಾಹಟಿಯಲ್ಲಿ ನಡೆದ ಐಪಿಎಲ್ನ 11ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಭಾನುವಾರ ಚೆನ್ನೈ ಸೂಪರ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 6 ರನ್ಗಳಿಂದ ರೋಚಕ ಗೆಲುವು ಸಾಧಿಸಿತು. ಇದರೊಂದಿಗೆ ಸತತ ಎರಡೂ ಪಂದ್ಯಗಳನ್ನು ಸೋತು ಕಂಗೆಟ್ಟಿದ್ದ ರಾಜಸ್ಥಾನ ತಂಡ ಇದೀಗ ಗೆಲುವಿನ ಖಾತೆ ತೆರೆದಿದೆ.
ಆದರೆ ಈ ಪಂದ್ಯ ಗೆದ್ದ ಖುಷಿಯಲ್ಲಿದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ಗೆ ಬಿಸಿಸಿಐ ಶಾಕ್ ನೀಡಿದ್ದು, 12 ಲಕ್ಷ ದಂಡ ವಿಧಿಸಿದೆ.
ಸಿಎಸ್ಕೆ ವಿರುದ್ಧ ಪಂದ್ಯ ಗೆದ್ದ ಸಂಭ್ರಮದಲ್ಲಿದ್ದ ರಾಜಸ್ಥಾನ ರಾಯಲ್ಸ್ ನಾಯಕ ರಿಯಾನ್ ಪರಾಗ್ಗೆ ಬಿಸಿಸಿಐ ದಂಡ ವಿಧಿಸಿದೆ. ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ನಾಯಕ ರಿಯಾನ್ ಪರಾಗ್ ಚೆನ್ನೈ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ ದಂಡ ವಿಧಿಸಲಾಗಿದೆ. ಇದು ಮತ್ತೆ ಸಂಭವಿಸಿದರೆ, ಒಂದು ಪಂದ್ಯದ ನಿಷೇಧ ಹೇರಲಾಗುತ್ತದೆ.