ಗೋಕಾಕ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ಇಡೀ ವಿಶ್ವಕ್ಕೆ ಮಾಹಿತಿ ವಿವರಿಸಿದ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ್ದಾರೆಂದು ಗೋಕಾಕದಲ್ಲಿ ಡಾ:ಮಹಾಂತೇಶ ಕಡಾಡಿಯವರು ಪ್ರಕರಣ ದಾಖಲಿಸುವಂತೆ ತಮ್ಮಬೆಂಬಲಿಗರೊಂದಿಗೆ ಮನವಿ ಮಾಡಿದರು.
ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿಯ ಸೊಸೆ. ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವನ ವಿರುದ್ಧ ಎಫ್‌ಐಆರ್ ಮಾಡಿಕೊಂಡು, ಕ್ರಮ ತೆಗೆದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ತಿಳಿಸುವಂತೆ ಬೆಳಗಾವಿ ಎಸ್‌ಪಿ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಬಿಜೆಪಿ ಮುಖಂಡನ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೆ ಅವಮಾನದಂತೆ ಅಲ್ಲ. ಇಡೀ ದೇಶಕ್ಕೆ ಅವಮಾನ ಮಾಡಿದಂತೆ. ಇಂತಹ ಕೀಳು ಮನಸ್ಸು ಯಾರಿಗೂ ಬರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಧ್ಯಪ್ರದೇಶ ಸಚಿವ ಭಾಷಣ ಮಾಡುವ ಸಂದರ್ಭದಲ್ಲಿ ಕರ್ನಲ್ ಸೋಫಿಯಾ ಖುರೇಷಿಯನ್ನು ಉಗ್ರರ ಸಹೋದರಿ ಎಂದಿದ್ದರು
ಅದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಮನೋಹರ ಮೇಗೇರಿ