Ad imageAd image

ರಾಧಾಕೃಷ್ಣರ ವೇಷ ಧರಿಸಿ ಸಂಭ್ರಮಿಸಿದ ಸರ್ಕಾರಿ ಶಾಲಾ ಪುಟಾಣಿಗಳು

Bharath Vaibhav
ರಾಧಾಕೃಷ್ಣರ ವೇಷ ಧರಿಸಿ ಸಂಭ್ರಮಿಸಿದ ಸರ್ಕಾರಿ ಶಾಲಾ ಪುಟಾಣಿಗಳು
WhatsApp Group Join Now
Telegram Group Join Now

ತುರುವೇಕೆರೆ : ಪಟ್ಟಣದ 12ನೇ ವಾರ್ಡಿನಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಪುಟಾಣಿಗಳು ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾಧಾ ಕೃಷ್ಣರ ವೇಷಭೂಷಣಗಳನ್ನು ತೊಟ್ಟು ಸಂಭ್ರಮಿಸಿದರು.

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶಾಲೆಯಲ್ಲಿ ಮಕ್ಕಳಿಗಾಗಿ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಶ್ರೀಕೃಷ್ಣನ ಭಾವಚಿತ್ರಕ್ಕೆ ಶಿಕ್ಷಕರು ಪುಟಾಣಿಗಳು ಪೂಜೆ ಸಲ್ಲಿಸಿದರು.

ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಮಹತ್ವ ತಿಳಿಸಿದರು. ರಾಧೆ, ಶ್ರೀಕೃಷ್ಣನ ವೇಷಭೂಷಣ ಧರಿಸಿದ್ದ ವಿದ್ಯಾರ್ಥಿಗಳು ಹಾಡು ಹೇಳಿ, ನೃತ್ಯ ಮಾಡಿ ನೆರೆದಿದ್ದ ಪೋಷಕರನ್ನು ರಂಜಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಂಕರ್, ಮುಖ್ಯ ಶಿಕ್ಷಕ ನಂ.ರಾಜು, ಶಿಕ್ಷಕಿಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!