ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಸಿಡಬ್ಲೂಸಿ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೆ.ಸಿ ವೇಣುಗೋಪಾಲ್ ಅವರು, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದ್ದರಿಂದಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಂತೆ ಆಯ್ತು ಎಂದರು.
ಇಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಾಬೇಕೆಂದು ಎಲ್ಲರೂ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಹೊರತಾಗಿ ಬೇರಾರೂ ನಾಯಕರಿಲ್ಲ ಅಂತ ನಿರ್ಣಯಕ್ಕೆ ಬರಲಾಗಿದೆ ಎಂದು ತಿಳಿಸಿದರು.
ಲೋಕಸಭೆ ವಿಪಕ್ಷ ನಾಯಕರಾಗಲು ರಾಹುಲ್ ಗಾಂಧಿ ಸೂಕ್ತ ಎಂಬುದಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಒಕ್ಕೊರಲ ಒಮ್ಮತವನ್ನು ವ್ಯಕ್ತಪಡಿಸಿದ್ದಾರೆ.
ಈ ಮೂಲಕ ಸಿಡಬ್ಲ್ಯೂ ಸಭೆಯಲ್ಲಿ ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿ, ನಿರ್ಣಯಕ್ಕೆ ಅಂಗೀಕಾರ ನೀಡಲಾಗಿದೆ ಎಂಬುದಾಗಿ ಹೇಳಿದರು.
ಒಟ್ಟಾರೆಯಾಗಿ ಲೋಕಸಭೆಯಲ್ಲಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂದು ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸದಸ್ಯರು ನಿರ್ಣಯವನ್ನು ಅಂಗೀಕರಿಸಿದ್ದಾರೆ.