ನವದೆಹಲಿ : ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶದಲ್ಲಿ ನಿಂತು ಭಾರತದ ಕುರಿತು, ಇಲ್ಲಿನ ಚುನಾವಣಾ ವ್ಯವಸ್ಥೆಯ ಕುರಿತು ಅಪನಂಬಿಕೆಯ ಮಾತುಗಳನ್ನಾಡುವ ಮೂಲಕ ಭಾರತ ವಿರೋಧಿ ನಿಲುವು ತಾಳಿದೆದ್ದಾರೆ.
ಸದ್ಯ ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.ಈ ವೇಳೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಭಾರತದ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಅಮೆರಿಕಾದ ಬೋಸ್ಟನ್‌ನಲ್ಲಿ ಭಾರತೀಯ ವಲಸಿಗ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ರಾಗ, ಚುನಾವಣೆಯ ವ್ಯವಸ್ಥೆಯಲ್ಲಿ ತಪ್ಪಾಗಿದೆ.ರಾಜ್ಯದ ಜನಸಂಖ್ಯೆಗಿಂತ ಹೆಚ್ಚಿನ ಜನ ಮಹಾರಾಷ್ಟ್ರದ ಎಲೆಕ್ಷನ್ ನಲ್ಲಿ ಮತದಾನ ಮಾಡಿದ್ದಾರೆ ಎಂದಿದ್ದಾರೆ.
ಇನ್ನು ಸಂಜೆ ಚುನಾವಣಾ ಆಯೋಗ ಒಂದು ಅಂಕಿಅಂಶ ಹೇಳಿ,ಆ ನಂತರ 65 ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ ಎಂದು ತಿಳಿಸಿದೆ. ಎರಡು ತಾಸಿನಲ್ಲಿ ಇಷ್ಟು ಜನ ಮತದಾನ ಮಾಡುವುದು ಅಸಾಧ್ಯ ಎಂದು ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ದ ಅನುಮಾನ ವ್ಯಕ್ತಪಡಿಸಿದ್ದಾರೆ.