ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಜೊತೆಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದರು.
ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಮೊದಲಾದವರು ಉಪಸ್ಥಿತರಿದ್ದರು.
ಇನ್ನು ಅಮೇಥಿ ಕ್ಷೇತ್ರದಿಂದ ಕೆ.ಎಲ್ ಶರ್ಮಾ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ರಾಯ್ ಬರೇಲಿ ಕ್ಷೇತ್ರದಿಂದ ಬಿಜೆಪಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ.




